ಬೆಂಗಳೂರು, ಏ.15 (DaijiworldNews/AA): ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಉದ್ಯಮಿ ಅನುಕೂಲ್ ಮಿಶ್ರಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಅವರ ನಿಶ್ಚಿತಾರ್ಥ ಗುಟ್ಟಾಗಿ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈಷ್ಣವಿ ಗೌಡ ಅವರು ತಮ್ಮ ನಿಶ್ಚಿತಾರ್ಥದ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರಿಗೆ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ವೈಷ್ಣವಿ ಗೌಡ 'ಸೀತಾ ರಾಮ' ಧಾರಾವಾಹಿ ಕೆಲಸಗಳ ಮಧ್ಯೆ ಬ್ರೇಕ್ ಪಡೆದು ಅದ್ದೂರಿಯಾಗಿ ತಮ್ಮ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಶೇರ್ ಮಾಡಿಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.