ಬೆಂಗಳೂರು, ಡಿ. 10 (DaijiworldNews/AK): ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ (ಡಿಸೆಂಬರ್ 11) ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬುಕ್ ಮೈ ಶೋನಲ್ಲಿ ಚಾಲ್ತಿಯಲ್ಲಿದೆ.

ಸಿನಿಮಾ ಬಿಡುಗಡೆಗೆ ಒಂದು ದಿನ ಮುಂಚಿತವಾಗಿ ‘ಡೆವಿಲ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿದೆ.
ಈ ಮೊದಲು ‘ಡೆವಿಲ್’ ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡವು ಸಿನಿಮಾದ ಬಿಡುಗಡೆಯನ್ನು ಡಿಸೆಂಬರ್ 11 ರಂದೇ ಮಾಡುವುದಾಗಿ ಘೋಷಿಸಿತು. ಅಭಿಮಾನಿಗಳ ಒತ್ತಾಯದ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಚಿತ್ರತಂಡ ಹೇಳಿದೆ.
‘ಡೆವಿಲ್’ ಸಿನಿಮಾನಲ್ಲಿ ದರ್ಶನ್ ಜೊತೆಗೆ ರಚನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಮಿಲನ ಪ್ರಕಾಶ್. ಸಿನಿಮಾನಲ್ಲಿ ಅಚ್ಯುತ್ ಕುಮಾರ್, ವಿನಯ್ ಗೌಡ, ಗಿಲ್ಲಿ ನಟ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ.