ಮುಂಬೈ, ಏ. 07 (DaijiworldNews/AK):ನಟಿ ತ್ರಿಷಾ ಕೃಷ್ಣನ್ ಇದೀಗ ಹೆಚ್ಚು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ವಿಜಯ್ ಜೊತೆಗಿನ ಗೆಳೆತನ. ವಿಜಯ್ ಹಾಗೂ ತ್ರಿಷಾ ಮಧ್ಯೆ ಅಫೇರ್ ಇದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ತ್ರಿಷಾ ಹಂಚಿಕೊಂಡ ಸಾಲುಗಳು ಗಮನ ಸೆಳೆದಿವೆ.
ತ್ರಿಷಾ ಅವರು ತಮಿಳಿನ ಖ್ಯಾತ ನಟಿ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಅವರು ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ‘ಪವರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಹೀಗಾಗಿ, ಕನ್ನಡದವರಿಗೂ ಅವರ ಪರಿಚಯ ಇದೆ. ತ್ರಿಷಾ ವಿಜಯ್ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಬ್ಬರ ಬಾಂಧವ್ಯ ಚೆನ್ನಾಗಿಯೇ ಇದೆ. ಇದನ್ನು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಪ್ರೀತಿ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
‘ಪ್ರೀತಿಯೇ ಎಲ್ಲವೂ ಅಲ್ಲ, ಆದರೂ ಪ್ರೀತಿ ಇಲ್ಲದೆ ಎಲ್ಲವೂ ಅರ್ಥಹೀನ’ ಎಂಬ ಸಾಲುಗಳನ್ನು ತ್ರಿಷಾ ಹಂಚಿಕೊಂಡಿದ್ದಾರೆ. ಅವರ ಇನ್ಸ್ಟಾ ಸ್ಟೋರಿ ಇದೀಗ ಗಮನ ಸೆಳೆದಿದೆ. ತ್ರಿಷಾ ಹೆಸರು ವಿಜಯ್ ಜೊತೆ ಚರ್ಚೆ ಆಗುವಾಗಲೇ ಈ ರೀತಿಯಲ್ಲಿ ಅವರು ಪೋಸ್ಟ್ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ.