ಮುಂಬೈ, ಮೇ. 30 (DaijiworldNews/AA): ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಉತ್ತಮ ಪ್ರದರ್ಶನ ನೀಡಿರುವ ವೈಭವ್ ಸೂರ್ಯವಂಶಿ ಅವರ ಆಟವನ್ನು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ವೈಭವ್ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ. ಆದರೆ ಈ ಹುಡುಗ ಈ ವಯಸ್ಸಿಗೆ ಇಷ್ಟು ಅದ್ಭುತವಾಗಿ ಆಡುತ್ತಿದ್ದಾನೆ' ಎಂದು ತಿಳಿಸಿದ್ದಾರೆ.
ವೈಭವ್ ಆಟಕ್ಕೆ ಅಮಿತಾಭ್ ಮಾತ್ರವಲ್ಲದೆ ಅನೇಕ ದಿಗ್ಗಜರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮ್ಮ 2ನೇ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿ, ಕ್ರಿಕೆಟ್ ಜಗತ್ತು ತಮ್ಮತ್ತ ತಿರುಗಿ ನೋಡುವಂತೆ ಮಾಡಿರುವ ವೈಭವ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅತಿ ವೇಗವಾಗಿ 1000 ರನ್ ಹಾಗೂ ಪ್ಲೇಆಫ್ನಲ್ಲೇ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.