ಮುಂಬೈ, ಸೆ.19 (DaijiworldNews/AK): ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಹೆಣ್ಣು ಮಗು ಜನಿಸಿದೆ. ಇದು ಎರಡನೇ ಮಗುವಾಗಿದ್ದು, ಮೊದಲನೇಯ ಮಗುವೂ ಕೂಡ ಹೆಣ್ಣು ಮಗು ಆಗಿತ್ತು.

ಇಂದು (ಸೆಪ್ಟೆಂಬರ್ 19) ಮುಂಬೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಗು ಜನಿಸಿದೆ. ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರುಗಳು ಇತ್ತೀಚೆಗಷ್ಟೆ ಮುಂಬೈನ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.
ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರಿಗೆ 2024ರಲ್ಲಿ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ‘ದುವಾ’ ಎಂದು ಅವರು ಹೆಸರಿಟ್ಟಿದ್ದರು. ಇದೀಗ ಮತ್ತೊಮ್ಮೆ ದೀಪಿಕಾ ಅವರಿಗೆ ಹೆಣ್ಣು ಮಗು ಜನಿಸಿದೆ. ತಮಗೆ ಮಗು ಜನಿಸಿರುವ ಬಗ್ಗೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ಪಡುಕೋಣೆ ಕೆಲವೇ ಸಮಯದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರುಗಳು 2018 ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.