ಬ್ರಸೆಲ್ಸ್, ಏ.14 (DaijiworldNews/AA): ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಇಡಿ ಶೋಧ ನಡೆಸುತ್ತಿತ್ತು.
ಕ್ಯಾನ್ಸರ್ ಚಿಕಿತ್ಸೆಗೆಂದು ಕೆರಿಬಿಯನ್ ದ್ವೀಪದ ನಾಡಿನಿಂದ ಬೆಲ್ಜಿಯಂಗೆ ಬಂದು ಆಸ್ಪತ್ರೆಯಲ್ಲಿದ್ದಾಗ ಆರೋಪಿ ಮೆಹುಲ್ ಚೋಕ್ಸಿಯನ್ನು ಶನಿವಾರ ಬಂಧಿತಸಲಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ. ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಒಪ್ಪಿಸುವ ಸಾಧ್ಯತೆ ಇದೆ. ಇನ್ನು ನೀರವ್ ಮೋದಿ ಬ್ರಿಟನ್ ದೇಶದಲ್ಲಿ ಬಂಧಿತರಾಗಿ ಕಸ್ಟಡಿಯಲ್ಲಿದ್ದಾರೆ. ಅವರನ್ನೂ ಭಾರತಕ್ಕೆ ತರುವ ಪ್ರಯತ್ನ ಕೆಲ ವರ್ಷಗಳಿಂದ ನಡೆಯುತ್ತಿದೆ. ಆದರೆ ಅದು ಸಾಧ್ಯವಾಗಿಲ್ಲ.
2018ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದ. ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು ಎಂದು ಹೇಳಾಗುತ್ತಿತ್ತು. ಆದರೆ, ಇತ್ತೀಚೆಗೆ ಅವರು ಬೆಲ್ಜಿಯಂನ ಆಂಟ್ವೆರ್ಪ್ನಲ್ಲಿ ಇದ್ದಾರೆ ಎಂಬ ಮಾಹಿತಿ ಲಭಿಸಿತ್ತು.