ಅಮೇರಿಕಾ ಏ.23DaijiworldNews/AK): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂಬ ಕಾರಣಕ್ಕೆ ಭಾರತದೊಂದಿಗೆ ಒಗ್ಗಟ್ಟಿನ ಸಂದೇಶವನ್ನು ಕಳುಹಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಭಯೋತ್ಪಾದನೆಯ ವಿರುದ್ಧ ನಾವು ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದ್ದಾರೆ.
ಕಾಶ್ಮೀರದಲ್ಲಿ ಇಂದು ನಡೆದ ಘಟನೆ ತೀವ್ರ ಆತಂಕಕಾರಿ ಸುದ್ದಿಯಾಗಿದೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ. ಮೃತಪಟ್ಟವರ ಆತ್ಮಗಳಿಗೆ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಿ ಮೋದಿ ಮತ್ತು ಭಾರತದ ಪ್ರೀತಿಯ ಜನರಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಸಹಾನುಭೂತಿ ಇದೆ. ನಾವು ನಿಮ್ಮೊಂದಿಗೆ ಇದ್ದೇವೆ!” ಎಂದು ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಬೃಹತ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ.
ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಇದನ್ನು ಮಾಡಿದವರು ಅರ್ಹವಾದ ಶಿಕ್ಷೆಯನ್ನು ಅನುಭವಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ರಷ್ಯಾದ ಅಧ್ಯಕ್ಷರು ಸಂದೇಶದಲ್ಲಿ ತಿಳಿಸಿದ್ದಾರೆ.ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಹೋರಾಡುವಲ್ಲಿ ಭಾರತೀಯ ಪಾಲುದಾರರೊಂದಿಗೆ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ನಮ್ಮ ಬದ್ಧತೆಯನ್ನು ನಾನು ಪುನರುಚ್ಚರಿಸಲು ಬಯಸುತ್ತೇನೆ. ದಯವಿಟ್ಟು ಮೃತರ ಆತ್ಮೀಯರಿಗೆ ನಮ್ಮ ಸಂತಾಪ ತಿಳಿಸಿ ಹಾಗೂ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅವರು ಹೇಳಿದ್ದಾರೆ.