ಬಾಂಗ್ಲಾದೇಶ, ಏ.30(DaijiworldNews/TA): ದೇಶದ್ರೋಹ ಪ್ರಕರಣದಲ್ಲಿ ಬಾಂಗ್ಲಾದೇಶದ ನ್ಯಾಯಾಲಯವು ಬುಧವಾರ ಮಾಜಿ ಇಸ್ಕಾನ್ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಜಾಮೀನು ನೀಡಿದೆ. ಕಳೆದ ವರ್ಷ ಅಕ್ಟೋಬರ್ 30 ರಂದು ಚಿತ್ತಗಾಂಗ್ನಲ್ಲಿ ಅವರ ಮತ್ತು ಇತರ 18 ಜನರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ವಿವಾದದ ನಂತರ ದಾಸ್ ಅವರನ್ನು ಬಂಧಿಸಲಾಯಿತು .

ದಾಸ್ ಅವರನ್ನು ಮಂಗಳವಾರ ಚಿತ್ತಗಾಂಗ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ಅಲ್ಲಿ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಲಾಯಿತು ಮತ್ತು ಅವರನ್ನು ವಶಕ್ಕೆ ಪಡೆಯಲಾಯಿತು. ಈ ಬಂಧನವು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಅನೇಕರು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಅವರ ಸರ್ಕಾರದ ಪತನದ ನಂತರದ ರಾಜಕೀಯ ಕ್ರಾಂತಿಯ ನಂತರ, ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಎದುರಿಸುತ್ತಿರುವ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ತಾರತಮ್ಯದ ವಿರುದ್ಧ ದಾಸ್ ಪ್ರಮುಖ ಧ್ವನಿಯಾಗಿ ಹೊರಹೊಮ್ಮಿದವರು.