ಇಸ್ಲಮಾಬಾದ್,ಜೂ. 23 (DaijiworldNews/ AK): ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಇಂದು (ಸೋಮವಾರ) ಭಾರತಕ್ಕೆ ಮತ್ತೊಂದು ಬೆದರಿಕೆಯನ್ನು ಹಾಕಿದ್ದಾರೆ.

ಭಾರತ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ಭಾರತವೇನಾದರೂ ಪಾಕಿಸ್ತಾನಕ್ಕೆ ತನ್ನ ನ್ಯಾಯಯುತವಾದ ನೀರಿನ ಪಾಲನ್ನು ನಿರಾಕರಿಸಿದರೆ ನಮ್ಮ ದೇಶ ಯುದ್ಧಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಹೇಳಿದ್ದಾರೆ
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಕಳೆದ ವಾರ ಗೃಹ ಸಚಿವ ಅಮಿತ್ ಶಾ ಐತಿಹಾಸಿಕ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದ್ದರು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಮಿತ್ ಶಾ ಅವರ ಅಂತಾರಾಷ್ಟ್ರೀಯ ಒಪ್ಪಂದಗಳ ನಿರ್ಲಕ್ಷ್ಯವನ್ನು ಟೀಕಿಸಿದ ಎರಡು ದಿನಗಳ ಬಳಿಕ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಲ್ ಭುಟ್ಟೋ ಅವರ ಹೇಳಿಕೆಗಳು ಬಂದಿವೆ.