ಆಮ್ಸ್ಟರ್ಡ್ಯಾಮ್, ಮೇ. 16 (DaijiworldNews/AK):ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿ ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಭಾಗವಾಗಿ ಅವರು ಶುಕ್ರವಾರ ನೆದರ್ಲೆಂಡ್ಸ್ ಭೇಟಿ ನೀಡಿದ್ದಾರೆ.

ಈ ವೇಳೆ ಮೋದಿಯವರು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸುವ ಕುರಿತು ನೆದರ್ಲೆಂಡ್ನ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಚರ್ಚಿಸಿದ್ದಾರೆ. ವ್ಯಾಪಾರ, ತಂತ್ರಜ್ಞಾನ, ರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನದ ವಿಷಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಹಾರಕ್ಕೆ ಭಾರತವೇ ಸೂಕ್ತ: ರಷ್ಯಾ ವಿದೇಶಾಂಗ ಸಚಿವ
ಮೇ 15 ರಿಂದ 17 ರವರೆಗಿನ ಮೋದಿಯವರ ಈ ಯುರೋಪ್ ರಾಷ್ಟ್ರಗಳ ಭೇಟಿ 2017ರ ನಂತರ ಎರಡನೇ ಭೇಟಿಯಾಗಿದೆ. ಈ ಭೇಟಿಯನ್ನು ಅಧಿಕಾರಿಗಳು ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ದ್ವಿಪಕ್ಷೀಯ ಸಂಬಂಧದ ಮಹತ್ವದ ಘಟ್ಟ ಎಂದು ಬಣ್ಣಿಸಿದ್ದಾರೆ.