ರೋಮ್, ಮೇ. 20 (DaijiworldNews/AK): ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರಾಗಿದ್ದು, ಇವರಿಬ್ಬರ ಸ್ನೇಹವನ್ನು ಸಾಮಾಜಿಕ ಜಾಲತಾಣದಲ್ಲಿ ‘ಮೆಲೋಡಿ’ ಎಂದೇ ಕರೆಯಲಾಗುತ್ತಿತ್ತು. ಇದೀಗ ಮೋದಿ ‘ಮೆಲೋಡಿ’ ಚಾಕೋಲೇಟ್ ಕೊಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ.
ಮೋದಿ ಚಾಕೋಲೇಟ್ ಕೊಡುವ ವೀಡಿಯೋವನ್ನು ಮೆಲೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಸದ್ಯ ಈ ವೀಡಿಯೋ 19.6 ಮಿಲಿಯನ್ ವೀಕ್ಷಣೆಯನ್ನು ಪಡೆದಿದೆ.