ಕಾಬೂಲ್, ಮೇ. 30 (DaijiworldNews/AA): ಪಾಕಿಸ್ತಾನದಿಂದ ಅಫ್ಘಾನಿಸ್ತಾನ ನಿರಾಶ್ರಿತರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಪೂರ್ವ ಅಫ್ಘಾನಿಸ್ತಾನದ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಟ್ರಕ್ನಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ನೆಲೆಸಿದ್ದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಜಲಾಲಾಬಾದ್ ಮತ್ತು ಕಾಬೂಲ್ ನಡುವಿನ ಹೆದ್ದಾರಿ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಪರಿಣಾಮ ಟ್ರಕ್ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ.
ಈ ಅಪಘಾತದಲ್ಲಿ 10 ಮಂದಿ ಮಕ್ಕಳು, 36 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರು ಸೇರಿ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 36ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲಗ್ಮನ್ ಪ್ರಾಂತ್ಯದ ರಾಜ್ಯಪಾಲರ ವಕ್ತಾರ ಅಬ್ದುಲ್ ಮಲಿಕ್ ನಿಯಾಜಯ್ ಮಾಹಿತಿ ನೀಡಿದ್ದಾರೆ.