ಟೆಹ್ರಾನ್, ಅ.31 (DaijiworldNews/AA): ಹಾರ್ಮುಜ್ ಜಲಸಂಧಿಯಲ್ಲಿ 27 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಮೇಲೆ 'ಲಿಂಪೆಟ್ ಮೈನ್' ದಾಳಿ ನಡೆದಿರುವುದಾಗಿ ವರದಿಯಾಗಿದೆ.

ದಾಳಿಯಿಂದಾಗಿ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಹಡಗು ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿತು. ಈ ವೇಳೆ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಉಂಟಾಗಲಿಲ್ಲ. ಬಳಿಕ ಟ್ಯಾಂಕರ್ ತನ್ನ ಪ್ರಯಾಣವನ್ನು ಮುಂದುವರಿಸಿತು.
ಫೆಬ್ರವರಿಯಲ್ಲಿ ಸಂಘರ್ಷ ಆರಂಭವಾದಾಗಿನಿಂದ, ಈ ಹಾರ್ಮುಜ್ ಜಲಸಂಧಿಯಲ್ಲಿ 'ಲಿಂಪೆಟ್ ಮೈನ್'ಗಳನ್ನು ಯಶಸ್ವಿಯಾಗಿ ನಿಯೋಜಿಸಿದ ಮೊದಲ ಪ್ರಕರಣ ಇದಾಗಿದೆ. ಒಮನ್ನ ಖಸಾಬ್ನ ಈಶಾನ್ಯಕ್ಕೆ 46 ಕಿ.ಮೀ ದೂರದಲ್ಲಿ ಈ ಘಟನೆ ಸಂಭವಿಸಿದೆ.