ಜೆರುಸಲೆಮ್, ನ.15 (DaijiworldNews/AA): ದಕ್ಷಿಣ ಗಾಜಾದ ಖಾನ್ ಯೂನಿಸ್ನ ಅಲ್-ಮವಾಸಿ ಪ್ರದೇಶದಲ್ಲಿ ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ನ ಪ್ರಮುಖ ಕಮಾಂಡರ್ ಹತ್ಯೆಯಾಗಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ.

ಹಮಾಸ್ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಗಳ ರಫಾ ಬ್ರಿಗೇಡ್ ಕಮಾಂಡರ್ ಸಮೀರ್ (53) ಅಬು ಯೂನಿಸ್ ಈ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ನವೆಂಬರ್ 13 ರಂದು ಖಾನ್ ಯೂನಿಸ್ನ ನಾಸರ್ ವೈದ್ಯಕೀಯ ಸಂಕೀರ್ಣದ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ವೈದ್ಯ ಸೇರಿದಂತೆ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, 27 ಜನರು ಗಾಯಗೊಂಡಿದ್ದಾರೆ. ಇದು ಅಂತರರಾಷ್ಟ್ರೀಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.