ನ್ಯೂಯಾರ್ಕ್, ಜು 02 (Daijiworld News/MSP): ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ಅವರು ನವೆಂಬರ್ನಲ್ಲಿ ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಆಗಿದ್ದು, ತಾವು ಒಂದು ವೇಳೆ ಅಧಿಕಾರಕ್ಕೆ ಬಂದರೆ ಭಾರತ -ಅಮೇರಿಕಾ ಸಂಬಂಧವನ್ನು ಮತ್ತಷ್ಟು ಸುಧಾರಿಸಿ ಮುಂದಿನ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹೇಳಿದ್ದಾರೆ.
ಭಾರತ ನಮ್ಮೊಂದಿಗೆ ಅತ್ಯಂತ ಸಹಜವಾದ ಪಾಲುದಾರ ರಾಷ್ಟ್ರವಾಗಿದೆ. ನಮ್ಮ ದೇಶದಗಳ ನಡುವೆ ಇರುವ ಸಂಬಂಧವನ್ನು ಮತ್ತಷ್ಟು ಉತ್ತಮ ಪಡಿಸುವ ಜತೆಗೆ ಅದನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುವುದು ತಮ್ಮ ಆಡಳಿತದ ಆದ್ಯತೆ ಆಗಿರುತ್ತದೆ. ನಮ್ಮ ಹಾಗೂ ಅವರ ಸುರಕ್ಷತೆಯ ದೃಷ್ಟಿಯಿಂದಲೂ ಈ ಪ್ರದೇಶದಲ್ಲಿ ಭಾರತ ಅಮೆರಿಕದ ಪಾಲುದಾರ ರಾಷ್ಟ್ರವಾಗಿ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಸುಧಾರಣೆ ವಿಷಯದಲ್ಲಿ ಹೆಚ್ಚಿನ ಒಲವು ಹೊಂದಿರುವ ಜೋ ಬಿಡೆನ್ , ಅಮೆರಿಕ ಅಧ್ಯಕ್ಷೀಯ ಚುನಾವಣೆಗಾಗಿ ದೇಣಿಗೆ ಸಂಗ್ರಹದ ಸಭೆಯಲ್ಲಿ ಸಂಬಂಧ ಸುಧಾರಣೆ ಕುರಿತು ಪ್ರಸ್ತಾಪಿಸಿದ್ದಾರೆ.