ವಾಷಿಂಗ್ಟನ್, ಆ 11 (Daijiworld News/MSP): ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲೇ ಶ್ವೇತಭವನದ ಹೊರಗೆ ಗುಂಡಿನ ದಾಳಿ ನಡೆದಿದ್ದು, ತಕ್ಷಣ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಿಬ್ಬಂದಿ ಧಾವಿಸಿ ಪತ್ರಿಕಾಗೋಷ್ಠಿ ಸ್ಥಗಿತಗೊಳಿಸಿದ್ದಾರೆ.
ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಟ್ರಂಪ್ ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಅಮೆರಿಕದ ಸೀಕ್ರೆಟ್ ಸರ್ವೀಸ್ ಏಜೆಂಟ್ಸ್ ಬಂದೂಕುಧಾರಿ ವ್ಯಕ್ತಿಯನ್ನು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ದೊರಕಿದೆ ಎಂದಿದ್ದಾರೆ.
ಭದ್ರತಾ ಸಿಬ್ಬಂದಿ ತ್ವರಿತ ಮತ್ತು ಪರಿಣಾಮಕಾರಿ ಕೆಲಸದಿಂದ ದೊಡ್ಡ ಅನಾಹುತ ತಪ್ಪಿದೆ. ಸೀಕ್ರೆಟ್ ಸರ್ವೀಸ್ ಏಜೆಂಟ್ಸ್ ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಈ ದಾಳಿ ನನ್ನನ್ನು ಗುರಿಯಾಗಿಸಿಲ್ಲ ಎಂದು ನಾನು ನಂಬುತ್ತೇನೆ. ಅಲ್ಲದೆ ಯಾವುದೇ ರೀತಿಯಲ್ಲೂ ಶ್ವೇತಭವನದ ಭದ್ರತಾ ಲೋಪವಾಗಿಲ್ಲ ಎಂದು ನಂಬಿದ್ದೇನೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.