ಮಂಗಳೂರು, ಏ.09(DaijiworldNews/TA): ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ರಾಜ್ಯ ಸರ್ಕಾರವು ಹಿಂದೂಗಳ ಅವಹೇಳನ ಮಾಡಿ, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹನುಮಾನ್ ಚಾಲೀಸಾ ಹೇಳಿದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ಮುಸ್ಲಿಮರು ರಸ್ತೆಯಲ್ಲಿ ಅಟ್ಟಹಾಸ ಮೆರೆದರೂ ಕೂಡ ಸರ್ಕಾರ ಸುಮ್ಮನಿದೆ. ಈ ಸರ್ಕಾರವನ್ನು ಪೊಲೀಸರು ಶಾಶ್ವತ ಎಂದು ಅಂದುಕೊಂಡಿದ್ದಾರೆ. ಮುಂದಿನ ಮೂರು ವರ್ಷಗಳ ಬಳಿಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬೆಲೆ ಏರಿಕೆಯಿಂದ ರಾಜ್ಯದ ಜನತೆ ಹೈರಾಣಾಗಿದ್ದಾರೆ. ಇವರ ವಿರುದ್ಧ ಜನತೆ ಗ್ರಾಮ ಗ್ರಾಮದಲ್ಲಿ ಹೋರಾಟ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.