ಕಾರ್ಕಳ, ಜೂ. 02 (DaijiworldNews/AA): ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತನೊಬ್ಬನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.

ಬಲಪಂಥೀಯ ಕಾರ್ಯಕರ್ತ ರತ್ನಾಕರ ಅಮೀನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಫೇಸ್ಬುಕ್ ಪೇಜ್ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹಾಗೂ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಕೋಮು ಗಲಭೆ ಉಂಟು ಮಾಡಲು ಪ್ರೇರೆಪಿಸುವಂತಹ ಪೋಸ್ಟ್ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಆರೋಪಿ ರತ್ನಾಕರ ಅಮೀನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.