ಪುತ್ತೂರು,ಜು. 15 (DaijiworldNews/AK): ಪುತ್ತೂರು ಕಸ್ಬಾ ಗ್ರಾಮದ ಬೊಳುವಾರು ಎಂಬಲ್ಲಿ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಜುಲೈ 14 ರಂದು ಮಧ್ಯಾಹ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವ್ಯಕ್ತಿಯೊಬ್ಬ ತಲವಾರನ್ನು ಹಿಡಿದು ಜನರನ್ನು ಬೆದರಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಆ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಆತನನ್ನು ಹಾಸನದ ರಾಜು (45) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುತ್ತಿದ್ದಾರೆ. ಶಂಕಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 59/2025 ರ ಅಡಿಯಲ್ಲಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25(1B)(b) ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 110 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು.