ಸುಳ್ಯ, ಜು. 15(DaijiworldNews/TA): ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ ಸುಳ್ಯ ತಾಲೂಕು ಸಮಿತಿ ವತಿಯಿಂದ ಕಾರ್ಮಿಕರ ಪ್ರತಿಭಟನೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಸಮೀಪ ನಡೆಯಿತು.

ಕೆಂಪು ಕಲ್ಲು ಮತ್ತು ಮರಳು ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಲಾಯಿತು. ಕಾರ್ಮಿಕರಿಗೆ ಈ ಹಿಂದೆ ನೀಡುತ್ತಿದ್ದ ವಿವಿಧ ಸವಲತ್ತುಗಳನ್ನು ಕಡಿತ ಮಾಡದೇ ಹಿಂದಿನಂತೆ ನೀಡುವಂತೆ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಭಾರತೀಯ ಮಜ್ದೂರು ಸಂಘದ ರಾಜ್ಯ ಕಾವ್ಯದರ್ಶಿ ಜಯರಾಜ್ ಸಾಲಿಯಾನ್ ದಿಕ್ಕೂಚಿ ಭಾಷಣ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ನ.ಪಂ.ಅಧ್ಯಕ್ಷೆ ಶಶಿಕಲಾ ಎ.ನೀರಬಿದಿರೆ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮುಂತಾದವರು ಉಪಸ್ಥಿತರಿದ್ದರು.