ಬಂಟ್ವಾಳ,ಆ. 02 (DaijiworldNews/AK): ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಸಹಯೋಗದೊಂದಿಗೆ ಆಟಿದ ಗಮ್ಮತ್ ಕಾರ್ಯಕ್ರಮ ಬಿ.ಸಿ.ರೋಡಿನ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು.




ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಹಿಂದಿನ ಆರೋಗ್ಯ ಪದ್ಧತಿಯು ಆರೋಗ್ಯಕ್ಕೆ ಪೂರಕವಾಗಿದ್ದು, ನಮ್ಮ ಪೂರ್ವಜರಿಗೆ ಆಟಿ ತಿಂಗಳು ಕಠಿಣ ತಿಂಗಳಾಗಿತ್ತು. ಪ್ರಸ್ತುತ ಹಲವು ಕಾರ್ಯಕ್ರಮಗಳ ಮೂಲಕ ನಾವು ಪೂರ್ವಜರ ನಂಬಿಕೆಗಳನ್ನು ನೆನಪು ಮಾಡುತ್ತಿದ್ದೇವೆ ಎಂದರು.
ಉದ್ಘಾಟಿಸಿದ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಎಲ್ಲಾ ಕಾರ್ಯಕ್ರಮಗಳಿಗೆ ಇಲಾಖೆಗಳ ಅಧಿಕಾರಿಗಳು ಉತ್ತಮ ಸಹಕಾರ ನೀಡಿದ್ದಾರೆ ಎಂದರು.
ಶಿಕ್ಷಕ ವಿಠಲ್ ನಾಯಕ್ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ ಉಪಸ್ಥಿತರಿದ್ದರು.
ಬಂಟ್ವಾಳ ತಾ.ಪಂ.ಇಒ ಸಚಿನ್ಕುಮಾರ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ. ವಂದಿಸಿದರು. ಕಡೇಶ್ವಾಲ್ಯ ಪಿಡಿಒ ಸುನೀಲ್ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.