ಮಂಗಳೂರು, ಆ. 24 (DaijiworldNews/TA): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಯಕ್ಷಶಿಕ್ಷಣ ಅಭಿಯಾನದ ಅಂಗವಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಸಹಕಾರದೊಂದಿಗೆ ಮಂಗಳೂರಿನ ಪಿವಿಎಸ್ ನ ಡಾ.ಬಿ.ಆರ್. ಅಂಬೇಡ್ಕರ್ ಕುದ್ಮುಲ್ ರಂಗರಾವ್ ಪ್ರೀ ಮೆಟ್ರಿಕ್ ಗರ್ಲ್ಸ್ ಹಾಸ್ಟೆಲ್ ನಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನಾ ಸಮಾರಂಭ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಇವರು ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ತಾರಾನಾಥ್ ಶೆಟ್ಟಿ ಬೋಳಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕೃಷ್ಣ ಶೆಟ್ಟಿ ತಾರೆಮಾರ್, ಗೋಪಿನಾಥ್ ಶೆಟ್ಟಿ, ಪೂರ್ಣಿಮಾ ಶಾಸ್ತ್ರಿ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.