ಮಂಗಳೂರು, ಆ. 24 (DaijiworldNews/TA): ಕಾರೊಂದು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರು, 2 ಬೈಕ್, ಒಂದು ಸ್ಕೂಟರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಿಲಿಕುಳ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮುಂಭಾಗ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್, ಸ್ಕೂಟರ್ ಗೆ ಹಾನಿಯಾಗಿದೆ. ಆದರೆ ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಸ್ಥಳೀಯ ನಿವಾಸಿ ವಿಶ್ವನಾಥ್ ಅವರಿಗೆ ಸೇರಿದ ಕಾರು ಇದಾಗಿದ್ದು, ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು, ಬೈಕಂಪಾಡಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.