ಕಾರ್ಕಳ, ಆ. 26 (DaijiworldNews/AK): ಕಾರ್ಕಳದ ಕುಂತಲ್ಪಾಡಿಯಲ್ಲಿ ಮಂಗಳವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದ ಬಡ್ಡಿ ವ್ಯಾಪಾರಿ ನವೀನ್ ಪೂಜಾರಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಮಂಗಳೂರು ಮೂಲದ ಬಸ್ ಚಾಲಕ ಪರೀಕ್ಷಿತ್ ಸಂಜೀವ್ ಗೌಡ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಪರೀಕ್ಷಿತ್ ತನ್ನ ಪತ್ನಿಯಿಂದ ಬೇರ್ಪಟ್ಟು ಕಾರ್ಕಳದ ದೂಪದಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಮೃತ ನವೀನ್ ಕೂಡ ಪತ್ನಿ ಮತ್ತು ಮಕ್ಕಳಿಂದ ಬೇರ್ಪಟ್ಟ ನಂತರ ಒಂಟಿಯಾಗಿ ವಾಸಿಸುತ್ತಿದ್ದ. ಪರೀಕ್ಷಿತ್ಗೆ ಪರಿಚಿತಳಾಗಿದ್ದ ಮಹಿಳೆಯೊಂದಿಗೆ ನವೀನ್ ನಿಕಟ ಸಂಬಂಧ ಬೆಳೆಸಿಕೊಂಡಿದ್ದ ಪರೀಕ್ಷಿತ್ಗೆ ಇದು ಇಷ್ಟವಾಗದ ಕಾರಣ ಮಂಗಳವಾರ ಬೆಳಿಗ್ಗೆ ನವೀನ್ ಹತ್ಯೆಗೆ ಕಾರಣವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಪರೀಕ್ಷಿತ್ನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.