ಕಾರ್ಕಳ ಆ. 27 (DaijiworldNews/AK): ಮಂಗಳವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಕಳದ ಹೋಟೆಲ್ ಮಾಲೀಕನೊಬ್ಬನ ಕೊಲೆ ನಡೆದ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಕುಮೇರುಮನೆಯ ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕರ್ತವ್ಯದಲ್ಲಿರುವಾಗ ಕುಡಿದ ಅಮಲಿನಲ್ಲಿದ್ದ ಉತ್ತರ ಪ್ರದೇಶದ ಸಿಬ್ಬಂದಿಯೊಬ್ಬರಿಗೆ ಸಂತೋಷ್ ಶೆಟ್ಟಿ ಎಚ್ಚರಿಕೆ ನೀಡಿದ್ದರು. ಗದರಿಸುವಿಕೆಯಿಂದ ಕೋಪಗೊಂಡ ಸಿಬ್ಬಂದಿ ಅಡುಗೆ ಮನೆಯಿಂದ ಚಾಕುವನ್ನು ತಂದು ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತೋಷ್ ಶೆಟ್ಟಿ ಅವರ ಪಾರ್ಥೀವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಅವರ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ.