ಕಡಬ, ಆಗಸ್ಟ್ 28 (DaijiworldNews/TA): ತಾಲೂಕಿನಲ್ಲಿ ನಿನ್ನೆ ಸಂಜೆ ಮೊದಲು ಆರಂಭವಾದ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಇಂದು (ಆ. 28) ಕಡಬ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾ ಆಡಳಿತ ಈ ನಿರ್ಧಾರವನ್ನು ಮಳೆಗಾಲದ ಹಿನ್ನಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಂಡಿದೆ.