ಮಂಗಳೂರು, ಆ 28 (DaijiworldNews/AK): ಹವಾಮಾನ ಇಲಾಖೆ (ಐಎಂಡಿ) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್ಡಿಎಂಸಿ) ಮುನ್ಸೂಚನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಿದೆ.
ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


ಪೋಷಕರು ಮಕ್ಕಳನ್ನು ತಗ್ಗು ಪ್ರದೇಶಗಳು, ಕೊಳಗಳು, ನದಿ ತೀರಗಳು ಅಥವಾ ಸಮುದ್ರ ತೀರಗಳ ಬಳಿ ಹೋಗದಂತೆ ನೋಡಿಕೊಳ್ಳಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮತ್ತು ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ದಂಡೆಗಳು ಮತ್ತು ಕಡಲತೀರಕ್ಕೆ ಹೋಗದಂತೆ ಮನವಿ ಮಾಡಲಾಗಿದೆ.