ಪುತ್ತೂರು, ಆ 29 (DaijiworldNews/TA): ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.