ಮಂಗಳೂರು, ಆ. 29 (DaijiworldNews/AK):ಬೆಳ್ತಂಗಡಿಯ ಉಜಿರೆಯ ವಸತಿಗೃಹದಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ದಶಕದ ನಂತರ, ಚಿಕ್ಕಮಗಳೂರಿನ ವ್ಯಕ್ತಿಯೊಬ್ಬರಿಗೆ ಮಂಗಳೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಗಸ್ಟ್ 28 ರಂದು ನೀಡಿದ ತೀರ್ಪು 2014 ರಿಂದ ಕಾನೂನು ಗಮನದಲ್ಲಿ ಉಳಿದಿದ್ದ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ರಕರಣಕ್ಕೆ ಅಂತ್ಯ ಹಾಡಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ನಿರೀಕ್ಷಕ ಲಿಂಗಪ್ಪಪೂಜಾರಿ ಬೆಳ್ತಂಗಡಿ ಸಿಜೆ ಮತ್ತು ಎಂಎಫ್ಸಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಆರೋಪಿ ಬಾಳಪ್ಪನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ದಂಡ (ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು) ಮತ್ತು 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ವಿಧಿಸಿ ಅದೇಶಿಸಿರುದ್ದಾರೆ. ಸರಕಾರಿ ಅಭಿಯೋಜಕರಾಗಿ ಜ್ಯೋತಿ ಪಿ. ನಾಯಕ್ ವಾದ ಮಂಡಿಸಿದ್ದಾರೆ.