ಬೆಳ್ತಂಗಡಿ, ಸೆ. 01 (DaijiworldNews/AK): ಧರ್ಮಸ್ಥಳದ ಪ್ರಕರಣದ ಹಿಂದೆ ದೊಡ್ಡ ತಿಮಿಂಗಿಲಗಳಿವೆ. ಬುರುಡೆ ಹಿಂದೆ ಕೇರಳ, ತಮಿಳುನಾಡು, ದೆಹಲಿಯ ಕೆಲವರಿದ್ದಾರೆ. ಎನ್ಐಎ ತನಿಖೆ ಮೂಲಕ ಈ ಪ್ರಕರಣದ ಹಿಂದಿನ ಷಡ್ಯಂತ್ರವನ್ನು ಬಯಲಿಗೆ ತರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದರು.

ರಾಜ್ಯ ಬಿಜೆಪಿ ವತಿಯಿಂದ ನಡೆದ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿ, ಚಾಮುಂಡಿ ಹಿಂದೂಗಳದ್ದಲ್ಲ ಎನ್ನುವ ಶಿವಕುಮಾರ್, ಕಾಂಗ್ರೆಸ್ ಸರಕಾರದ ವಿರುದ್ಧ ಚಾಮುಂಡೇಶ್ವರಿ ಕಣ್ತೆರೆಯಲಿ ಎಂದು ಪ್ರಾರ್ಥನೆ ಮಾಡಿದ್ದಾಗಿ ತಿಳಿಸಿದರು.
ಸಿದ್ದರಾಮಯ್ಯನವರ ಸುತ್ತ ನಗರ ನಕ್ಸಲ್ ಗ್ಯಾಂಗ್, ತಿಮರೋಡಿ ಗ್ಯಾಂಗ್ ಸೇರಿಕೊಂಡಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಯಾವ ಮುಖ ಇಟ್ಟುಕೊಂಡು ಕಾಂಗ್ರೆಸ್ಸಿಗರು ಇಲ್ಲಿ ಬರುತ್ತಾರೆ ಎಂದು ಪ್ರಶ್ನಿಸಿದರು. ಇದು ಮತಾಂತರದ ಟೂಲ್ ಕಿಟ್. ಇದರ ವಿರುದ್ಧ ಹಿಂದೂಗಳು ಒಂದಾಗಬೇಕಿದೆ ಎಂದು ಮನವಿ ಮಾಡಿದರು.