ಮಂಗಳೂರು, ಅ. 21 (DaijiworldNews/TA): ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.