ಮಂಗಳೂರು, ನ. 01 (DaijiworldNews/AK): ನಿಟ್ಟೆ ವಿಶ್ವ ವಿದ್ಯಾಲಯದ ವತಿಯಿಂದ ಜಸ್ಟೀಸ್ ಕೆ. ಎಸ್ . ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವೆಂಬರ ಒಂದರಂದು ಆಚರಿಸಲಾಯಿತು.


ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಕುಲಸಚಿವರಾದ ಡಾ| ಹರ್ಷ ಹಾಲಹಳ್ಳಿ ಯವರು ಭಾಗವಹಿಸಿದರು. ಇವರೊಂದಿಗೆ ಉಪ ಕುಲ ಸಚಿವರಾದ ಡಾ| ಸುಮಾ ಬಲ್ಲಾಳ್ ಇವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಡೀನ್ ಡಾ| ಬಿ. ಸಂದೀಪ್ ರೈ , ಕೆ. ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿರುವ ಡಾ| ಸುಮಲತಾ ಆರ್. ಶೆಟ್ಟಿ ಯವರು ಉಪಸ್ಥಿತರಾಗಿದ್ದರು. ಈ ಕಾರ್ಯಕ್ರಮದಲ್ಲಿ ಆಹ್ವಾನಿತರಾಗಿ ಎಬಿ ಶೆಟ್ಟಿ ದಂತ ಮಹಾ ವಿದ್ಯಾಲಯದ ಪ್ರಾಂಶುಪಾಲ ಹಾಗೂ ಡೀನ್ ಆಗಿರುವ ಡಾ| ಮಿತ್ರ ಹೆಗ್ಡೆ, ಶ್ರೀ ವಿನೋದ್ ಅರಾಹ್ನ , ನಿರ್ದೇಶಕರು, ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್, ಡಾ। ನೇಸರ, ಉಸ್ತುವಾರಿ, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ , ನಿಟ್ಟೆ ಹಾಸ್ಪಿಟಾಲಿಟಿ ಸಂಸ್ಥೆಯ ಪ್ರಾಂಶುಪಾಲರಾದ ಡಾ| ಧೀರಜ್ ಪಾಠಕ್ , ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಉಪ ನಿರ್ದೇಶಕರಾದ ಡಾ| ಸಯ್ಯದ್ ಅಹಮ್ಮದ್, ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಶುಶ್ರೂಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಜಸ್ಸಿ೦ತಾ ಕ್ರಾಸ್ತಾ ಹಾಗೂ ವೈದ್ಯಕೀಯ ವಿಭಾಗಗಳ ಮುಖ್ಯಸ್ಥರು, ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಇತರ ವಿಭಾಗಗಳ ಸಿಬ್ಬಂದಿಗಳು ಭಾಗವಹಿಸಿದ್ದರು.
ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮೊದಲಿಗೆ ಧ್ವಜಾರೋಹಣವನ್ನು ಮಾಡಿ ನಾಡಗೀತೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ನಾಡು ನುಡಿಗೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಆರೈಕೆ ಮತ್ತು ಸಮಾಲೋಚನೆ ವಿಭಾಗದ ಶ್ರೀಮತಿ ಯಶೋಧರವರು ಕಾರ್ಯಕ್ರಮದ ನಿರೂಪಣೆಗೈದರು.