ಸುಳ್ಯ, ನ. 02 (DaijiworldNews/TA): ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ತಹಶೀಲ್ದಾರ್ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಶುಭ ಸಂದೇಶ ನೀಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡುತ್ತಾ, ಸುಳ್ಯ ತಾಲೂಕು ಕ್ರೀಡಾಂಗಣದ ಪೂರ್ತಿಗೆ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು ಮುಂದಿನ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸುಳ್ಯ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವಂತೆ ಆಗಲಿ ಅಲ್ಲದೇ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ಸಮಾನತೆಯಿಂದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ , ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ , ಇಒ ರಾಜಣ್ಣ , ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಚಂದ್ರಶೇಖರ ಪೇರಾಲು ,ನ.ಪಂ.ಸದಸ್ಯ ಎಂ. ವೆಂಕಪ್ಪ ಗೌಡ , ನ.ಪಂ. ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್ ಹೆಚ್ ಆರದ , ಗೋಕುಲ್ ದಾಸ್ ಕೆ , ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು ಕೆ , ಹರಪ್ರಸಾದ್ ತುದಿಯಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಹರಪ್ರಸಾದ್ ತುದಿಯಡ್ಕ ದಂಪತಿಯನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಅಲ್ಲದೇ 2024 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೆ. ಗೋಕುಲ್ ದಾಸ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ಇನ್ನು ಕಾರ್ಯಕ್ರಮದ ವೇಳೆ ರಾಷ್ಟ್ರ ಧ್ವಜ ಹಾರಿಸದೆಯೇ ರಾಷ್ಟ್ರ ಗೀತೆ ಹಾಡಿದ ಆಚಾತುರ್ಯವೂ ನಡೆಯಿತು.