ಬಂಟ್ವಾಳ, ನ. 02 (DaijiworldNews/AA): ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ವಿಟ್ಲದ ಅಳಿಕೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ (37) ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಅವರು ಅಲ್ಯೂಮಿನಿಯಂ ಪೈಪ್ ಬಳಸಿ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದಾಗ ಆ ಪೈಪ್ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಕ್ ಹೊಡೆದಿದೆ. ತಕ್ಷಣವೇ ಇಸ್ಮಾಯಿಲ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಪುತ್ರ ಮತ್ತು ಪತ್ರಿಯನ್ನು ಅಗಲಿದ್ದಾರೆ.