ಕಾರ್ಕಳ, ಡಿ. 10 (DaijiworldNews/AA): ಕಾರ್ಕಳದ ಕ್ರೈಸ್ಟ್ ಕಿಂಗ್ ಪಿಯು ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮೃತಿ ಮರಾಠೆ ಅವರು ರಾಜ್ಯ ಮಟ್ಟದ ಭಾವಗೀತೆ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರ ಕಚೇರಿಯ ಸಹಯೋಗದೊಂದಿಗೆ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ, ಸ್ಮೃತಿ ಮರಾಠೆ ಅವರು ಭಾವಗೀತೆ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಯು ಸಂಸ್ಥೆ ಮತ್ತು ಪ್ರದೇಶಕ್ಕೆ ಹೆಮ್ಮೆ ತಂದಿದೆ.