ಬಂಟ್ವಾಳ, ಡಿ. 23(DaijiworldNews/TA): ಅಪರಿಚಿತ ವಾಹನವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ.
ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕುತ್ತಿದ್ದಾರೆ.