ಉಡುಪಿ, ಜ. 02 (DaijiworldNews/AA): ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಗಳಾದ ಎನ್. ವಿನಯ್ ಹೆಗ್ಡೆ ಅವರು ಜನವರಿ 1 ರಂದು ನಿಧನರಾದ ಹಿನ್ನೆಲೆಯಲ್ಲಿ, ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ.

"ವಿನಯ್ ಹೆಗ್ಡೆ ಅವರು ಓರ್ವ ದಾರ್ಶನಿಕ ಶಿಕ್ಷಣ ತಜ್ಞರು, ದಕ್ಷ ಆಡಳಿತಗಾರರು ಮತ್ತು ಉನ್ನತ ಶಿಕ್ಷಣ ಹಾಗೂ ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಉದಾತ್ತ ವ್ಯಕ್ತಿತ್ವದವರು" ಎಂದು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸ್ಮರಿಸಿದ್ದಾರೆ.
"ವಿಶೇಷವಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಳು ಸಮಾಜದಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿವೆ. ಅವರ ಈ ಕಾರ್ಯಗಳು ಮುಂದಿನ ತಲೆಮಾರುಗಳಿಗೆ ಪ್ರೇರಣೆಯಾಗಲಿವೆ" ಎಂದು ಶ್ರೀಗಳು ನುಡಿದಿದ್ದಾರೆ.
ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ ಶ್ರೀಗಳು, ವಿನಯ್ ಹೆಗ್ಡೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬದವರಿಗೆ, ಸಂಬಂಧಿಕರಿಗೆ ಮತ್ತು ಇಡೀ ನಿಟ್ಟೆ ಶಿಕ್ಷಣ ಸಂಸ್ಥೆಯ ಸಮುದಾಯಕ್ಕೆ ನೀಡಲಿ ಎಂದು ಕೋರಿದ್ದಾರೆ.