ಸುಳ್ಯ, ಜ. 06 (DaijiworldNews/TA): ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರಿನಲ್ಲಿ ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ಕಪ್ಪಿದ್ದಾರೆ.

ಸುಳ್ಯದ ಸಲ್ಮಾನ್ ಬೈಕ್ ಅಪಘಾದಲ್ಲಿ ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಡಿ.5ರಂದು ಮಧ್ಯಾಹ್ನ ಅಪಘಾತ ನಡೆದಿತ್ತು. ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತಿದ್ದಾಗ ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟರು. ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ಅವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.