ಕಾಸರಗೋಡು, ಜ. 11 (DaijiworldNews/TA): ಚಲಿಸುತ್ತಿದ್ದ ಬಸ್ಸಿನ ಇಂಜಿನ್ ನಿಂದ ಹೊಗೆ ಕಾಣಿಸಿಕೊಂಡ ಘಟನೆ ಕಾಸರಗೋಡು ಉಳಿಯತ್ತಡ್ಕ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಘಟನೆ ಹಿನ್ನೆಲೆಯಲ್ಲಿ ಬಸ್ ಸಿಬ್ಬಂದಿ ಹಾಗೂ ಪ್ರಯಾಣಿಕರು ಕೆಲಹೊತ್ತು ಆತಂಕಗೊಂಡರು. ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಚಾಲಕ ಬಸ್ಸನ್ನು ನಿಲ್ಲಿಸಿದ್ದು, ಪ್ರಯಾಣಿಕರು ಬಸ್ಸಿನಿಂದ ಇಳಿದರು. ಸೀತಾಂಗೋಳಿ ಯಿಂದ ಕಾಸರಗೋಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಘಟನೆ ನಡೆದಿದೆ. ಬಸ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಕಾಸರಗೋಡು ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಅನಾಹುತ ತಪ್ಪಿಸಿದರು.