ಉಡುಪಿ, ಜ. 15 (DaijiworldNews/AK): ಸಾಮಾಜಿಕ ಮಾಧ್ಯಮ ಖಾತೆಗಳಾದ ಫೇಸ್ಬುಕ್ ಹಾಗೂ ವಾಟ್ಸಾಪ್ ನಲ್ಲಿ ಉಡುಪಿ ಜಿಲ್ಲಾ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಐಎಎಸ್, ತಮ್ಮ ಹೆಸರು ಮತ್ತು ಛಾಯಾಚಿತ್ರವನ್ನು ಬಳಸಿಕೊಂಡು ನಕಲಿ ಖಾತೆ ತೆರದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.

ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗಾಗಿ ಹಣ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಈಗಾಗಲೇ ಉಡುಪಿ ಸೆನ್ ರಾಣೆಯಲ್ಲಿ ದೂರು ದಾಖಲಾಗಿದೆ. ಆದರೂ ಕೂಡ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಯಾರೂ ಕೂಡ ಹಣ ನೀಡಬಾರದು . ಇಂತಹ ಸಂದೇಶಕ್ಕೆ ಸ್ಪಂದಿಸದಂತೆ ಜಿಲ್ಲಾಧಿಕಾರಿ ತಿಳಿದ್ದಾರೆ.
ಈ ಸಂಬಂಧ ಉಡುಪಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಔಪಚಾರಿಕ ದೂರು ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.