ಬಂಟ್ವಾಳ, ಜ.18 (DaijiworldNews/TA): ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪ ಮೂಡ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವರನ್ನು ನೇಮಿಸಲಾಗಿದೆ.

ಮಾಜಿ ಸಚಿವ ಬಿ ರಮಾನಾಥ ರೈ ಯವರ ಶಿಫಾರಸಿನ ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ. ಚಂದ್ರಶೇಖರ ಭಂಡಾರಿಯವರು ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್ ನ ಅಧ್ಯಕ್ಷರು ಏನ್ ಕರೀಂ ಉಪಸ್ಥಿತರಿದ್ದರು.