ಕಾಸರಗೋಡು, ಜ. 20 (DaijiworldNews/ AK): ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಟ್ಟಂಚಲ್ ತೆಕ್ಕಿಲ್ನಲ್ಲಿ ಸೋಮವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಜಿಪ್ ಬೈಲುಗುತ್ತು ನಿವಾಸಿ ಆಸಿಫ್ ಮುಹಮ್ಮದ್ (41) ಮತ್ತು ನಾಟೆಕಲ್ನ ಮುಹಮ್ಮದ್ ಶಫೀಕ್ (23) ಎಂದು ಗುರುತಿಸಲಾಗಿದೆ. ಮೃತರು ಮಂಗಳೂರು ಮೂಲದವರು.
ಬಿಎಂಡಬ್ಲ್ಯು ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾಸರಗೋಡಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾಹನದೊಳಗೆ ಸಿಲುಕಿದ್ದವರನ್ನು ರಕ್ಷಿಸಿದರು. ಗಾಯಾಳುಗಳನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.