ಪುತ್ತೂರು, ಜ. 22 (DaijiworldNews/AA): ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಾಗಿದೆ.

ಕಲ್ಲಡ ಪ್ರಭಾಕರ ಭಟ್ ಅವರು ಜನವರಿ 12 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುದ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ ಎಂದು ಆರೋಪಿಸಿ ಈ ಬಗ್ಗೆ ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬುವವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಭಾಷಣವನ್ನು ವಿಕಸನ ಟಿವಿ ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಡಾ.ಕಲ್ಲಡ ಪ್ರಭಾಕರ ಭಟ್ ರವರ ವಿರುದ್ಧ, ಈ ಭಾಷಣವನ್ನು ಪ್ರಸಾರ ಮಾಡಿದ ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕಾನೂನುಕ್ರಮ ಕೈಗೊಳ್ಳುವಂತೆ ದೂರು ನೀಡಿರುತ್ತಾರೆ.
ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196,299,302,353(2),3(5) BNS ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.