ಉಡುಪಿ, ಫೆ. 03 (DaijiworldNews/AK): ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯಡ್ಕ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ.


ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಎಸೆಯಲು ಪಟ್ಟು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮತ್ತೊಂದು ಬೈಕ್ಗೆ ಡಿಕ್ಕಿಯಾಗಿದೆ ಪರಿಣಾಮ ಬೈಕ್ ಸವಾರನು ರಸ್ತೆಗೆ ಬಿದ್ದಿದ್ದಾನೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.