ಮಂಗಳೂರು,ಫೆ. 06 (DaijiworldNews/AK): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಲಕ್ಷ್ಮೀಶ ಬಾಬು (48) ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾಧಿಕಾರಿ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಮಂಗಳೂರು ನಗರದ ಏಳನೇ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿತು. ನಂತರ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.