ಕಾಪು, ಫೆ. 11 (DaijiworldNews/AA): ಕರಾವಳಿಯ ಹೆಮ್ಮೆ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕಾಪುವಿನಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.




ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ಶಾಖಾ ಮುಖ್ಯಸ್ಥ ಹಫೀಜ್ ರೆಹಮಾನ್ ಅವರು ರಕ್ಷಿತಾ ಅವರಿಗೆ ಗೌರವ ಸಲ್ಲಿಸಿ, ಅವರ ಸಾಧನೆಗಾಗಿ ಅಭಿನಂದಿಸಿದರು. ಅಲ್ಲದೆ, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸನ್ಮಾನ ಸಮಾರಂಭದಲ್ಲಿ ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ, ಮಾರ್ಕೆಟಿಂಗ್ ಮ್ಯಾನೇಜರ್ ತಂಜೀಮ್ ಶಿರ್ವ ಹಾಗೂ ಸಿಬ್ಬಂದಿಗಳಾದ ವೈಷ್ಣವಿ ಮತ್ತು ನದೀಮ್ ಕೆ.ಟಿ. ಉಪಸ್ಥಿತರಿದ್ದರು.