ಸುಳ್ಯ, ಫೆ. 12 (DaijiworldNews/TA): ಜನರ ಪರವಾಗಿರುವ ಯಾವುದೇ ಹೊಸ ಯೋಜನೆ ಬಂದರೂ ವಿರೋಧಿಸುವುದು ಕಾಂಗ್ರೆಸ್ ಚಾಳಿಯಾಗಿದೆ. ವಿಬಿಜಿ ರಾಮ್ ಜಿ ಯೋಜನೆಗೆ ಕಾಂಗ್ರೆಸ್ ವಿರೋಧ ಅರ್ಥ ಹೀನ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ಜಿ ಯೋಜನೆಯನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಅವರು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಗೆ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

ಬಿಜೆಪಿಗೆ ಮಹಾತ್ಮಾಗಾಂಧೀಜಿಯವರ ಬಗ್ಗೆ ಅಪಾರ ಗೌರವವಿದ್ದು, ಗಾಂಧಿಯವರ ಕನಸನ್ನು ನನಸು ಮಾಡುವ ದೃಷ್ಟಿಯಲ್ಲಿ ಕಳೆದ 10 ವರ್ಷದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈಗ ಕಾಂಗ್ರೆಸ್ ನವರು ಅಪಪ್ರಚಾರ ಮಾಡುತ್ತಿದ್ದು, ಮೊನ್ನೆಯ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಈ ವಿಚಾರದಲ್ಲೇ ಸಮಯ ವ್ಯರ್ಥ ಮಾಡಿದ್ದಾರೆ.
ವಿಬಿಜಿ ರಾಮ್ಜಿ ಭ್ರಷ್ಟಾಚಾರ ತಡೆಗಟ್ಟಿ ಸಂಪೂರ್ಣ ಪಾರದರ್ಶಕವಾಗಿರುವ ಯೋಜನೆ ಎಂದು ಅವರು ಹೇಳಿದರು. ಜಿಲ್ಲಾ ಬಿಜೆಪಿ ವಕ್ತಾರ ವಿನಯಕುಮಾರ್ ಮುಳುಗಾಡು, ಮಂಡಲ ಸಮಿತಿ ಕೋಶಾಧಿಕಾರಿ ಸುಬೋನ್ ಶೆಟ್ಟಿ ಮೇನಾಲ, ಒಬಿಸಿ ಮೋರ್ಚಾದ ಜಿಲ್ಲಾ ಪದಾಧಿಕಾರಿ ಸೋಮನಾಥ ಪೂಜಾರಿ, ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬುದ್ದ ನಾಯ್ಕ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.