ಉಡುಪಿ, ಫೆ. 18 (DaijiworldNews/AK): ಉಡುಪಿಯ ಪೆರಂಪಳ್ಳಿಯಲ್ಲಿ ಕ್ರೇನ್ ಹರಿದು ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಪೆರಂಪಳ್ಳಿಯಲ್ಲಿ ನಡೆದಿದೆ.




ಪೆರಂಪಳ್ಳಿಯಲ್ಲಿರುವ ಹೆರ್ಗಾ ಸೊಸೈಟಿಯ ಮುಂದೆ ಪಾದಚಾರಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕ್ರೇನ್ ಚಾಲಕ ವಾಹನವನ್ನು ತಿರುಗಿಸಿ, ಮುಂದೆ ಬರುತ್ತಿದ್ದ ಕಾರಿಗೆ ದಾರಿ ಮಾಡಿಕೊಟ್ಟಿದ್ದಾನೆ. ಆ ವೇಳೆ ಪಾದಚಾರಿ ಮೇಲೆ ಕ್ರೇನ್ ಹರಿದಿದೆ.
ಕ್ರೇನ್ನ ಚಕ್ರದ ಕೆಳಗೆ ಸಿಲುಕಿಕೊಂಡಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಅಪಘಾತದ ನಂತರ ಕ್ರೇನ್ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.