ಮಂಗಳೂರು, ಫೆ. 19 (DaijiworldNews/TA): ದೇಶದ ವಿಕಸಿತ್ ಭಾರತ್- 2047’ ಸಾಕಾರಗೊಳಿಸಲು ಬ್ಯಾಂಕ್ಗಳ ಪಾತ್ರ ಮಹತ್ವ ದ್ದಾಗಿದ್ದು, ದೇಶದ ಆರ್ಥಿಕ ವಿಕಾಸದಲ್ಲಿ ಬ್ಯಾಂಕ್ಗಳು ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಮಾಜಿ ಐಎಎಸ್ ಅಧಿಕಾರಿ, ನೀತಿ ಸುಧಾರಕ ದೇಬಾಶೀಷ್ ಪಾಂಡ ಸಲಹೆ ನೀಡಿದ್ದಾರೆ.

























ಬುಧವಾರ ಮಂಗಳೂರಿನ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ‘ವಿಕಸಿತ್ ಭಾರತ್- 2047: ಹಣಕಾಸು ಸೇವೆಗಳ ಪಾತ್ರ’ ದ ಕುರಿತು ಪ್ರಧಾನ ಉಪನ್ಯಾಸ ನೀಡುತ್ತಿದ್ದರು. ಭಾರತವು ವಿಶ್ವದ 4ನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿದೆ, ಈ ದೇಶ ವಿಶ್ವದ ವೇಗವಾಗಿ ಬೆಳೆಯು ತ್ತಿರುವ ಆರ್ಥಿಕತೆ ಆಗಲಿದೆ ಎಂದು ಹಿಂದೆ ನಾವು ಊಹಿಸಿರಲಿಲ್ಲ. ಆದರೆ ಈ ಸಾಧನೆ ಆಗಿದೆ. ನಾವು ವಿಕಸಿತ್ ಭಾರತ್ ಎಂಬ ಮಹಾ ದೃಷ್ಟಿಯತ್ತ ಸಾಗುತ್ತಿದ್ದೇವೆ. ಈ ಪರಿಕಲ್ಪನೆ ಯನ್ನು ಸಾಕಾರಗೊಳಿಸುವುದು ಸಂಘ ಸಂಸ್ಥೆ ಗಳು, ಉದ್ಯಮ ಕ್ಷೇತ್ರ, ಅಧಿಕಾರಿಗಳು ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನೂ ಸರಕಾರದೊಂದಿಗೆ ಕೈ ಜೋಡಿಸಬೇಕಾಗಿದೆ. ಇದಕ್ಕೆ ದೀರ್ಘಕಾಲಿಕ, ಉನ್ನತ ವೇಗದ ಕಾರ್ಯೋನ್ಮುಖತೆಯೊಂದಿಗೆ ಉತ್ಪಾದಕತೆ, ಬಂಡವಾಳದ ದಕ್ಷತೆ ಮತ್ತು ಕಾರ್ಯಗತ ಸಾಮರ್ಥ್ಯ ಹೆಚ್ಚಳ, ಆರ್ಥಿಕ ಸ್ಥಿರತೆ, ಶಕ್ತಿಶಾಲಿಯಾದ ಹಣಕಾಸು ವ್ಯವಸ್ಥೆ ಮತ್ತು ಜಾಗತಿಕ ಆಘಾತಗಳನ್ನು ಎದುರಿಸುವ ಸಾಮರ್ಥ್ಯ ಬೇಕಾಗುತ್ತದೆ. ಈ ಸವಾಲು ಗಳನ್ನು ಎದುರಿಸಬೇಕಾಗಿದೆ ಎಂದು ದೇಬಾಶೀಷ್ ಹೇಳಿದರು.
ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡುತ್ತಾ, ವಿಕಸಿತ್ ಭಾರತ್ ದೃಷ್ಟಿಕೋನವು ಬ್ಯಾಂಕ್ಗಳಿಗೆ ಅನೇಕ ಅವಕಾಶಗಳನ್ನು ಸೃಷ್ಟಿಸಲಿದೆ. ಈ ಬೆಳವಣಿಗೆಯಲ್ಲಿ ಕೈಜೋಡಿಸುವ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಬದ್ಧತೆಯಿಂದ ಕಾರ್ಯ ನಿರ್ವಹಿಸಲಿದೆ. ಬ್ಯಾಂಕಿನ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವ ಜತೆಗೆ ವಿಕಸಿತ್ ಭಾರತ್ ಕಾರ್ಯ ಸಾಧನೆಯಲ್ಲಿ ಸಕ್ರಿಯ ಪಾತ್ರ ವಹಿಸಲಿದ್ದೇವೆ ಎಂದರು. ಬ್ಯಾಂಕ್ನ ಎಂಡಿ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಮಾತನಾಡಿದರು. ಕರ್ಣಾಟಕ ಬ್ಯಾಂಕ್ನ ಸಂಸ್ಥಾಪಕರ ಭಾವಚಿತ್ರಗಳಿಗೆ ಗೌರವ ಸಲ್ಲಿಸಿ, ಸಮಾರಂಭದಲ್ಲಿ ದೇಬಾಶೀಷ್ ಪಾಂಡರನ್ನು ವೇದಿಕೆ ಯಲ್ಲಿ ಸನ್ಮಾನಿಸ ಲಾಯಿತು ಬಳಿಕ ‘ನಾರಿ ತರಂಗಿಣಿ’ ಸಂಗೀತ ಕಛೇರಿ ನಡೆಯಿತು.