ಉಡುಪಿ, ಫೆ. 19 (DaijiworldNews/AK):ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ :ಬುಧವಾರ ತಡರಾತ್ರಿ ನಡೆದಿದೆ.

ಮೃತನನ್ನು ಉಡುಪಿಯ ಖಾಸಗಿ ಸಿಟಿ ಬಸ್ನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಂದೀಪ್ ಎಂದು ಗುರುತಿಸಲಾಗಿದೆ.
ಅಂಬಾಗಿಲು ಜಂಕ್ಷನ್ ಬಳಿಯ ಪೆರಂಪಳ್ಳಿ ಕ್ರಾಸ್ ರಸ್ತೆಯಲ್ಲಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರಿಗೂ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಭಾಗಿಯಾದ ಮತ್ತೊಬ್ಬ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಗಾಯಾಳುಗಳಿಬ್ಬರನ್ನೂ ಸರಕು ಸಾಗಣೆ ಟೆಂಪೋದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಘಟನೆಯ ವೀಡಿಯೊ ವೈರಲ್ ಆಗಿದೆ.